
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಕೊರೊನಾ ಕಾರಣದಿಂದ ಕಳೆದ 10 ತಿಂಗಳಿಂದ ಬಂದ್ ಆಗಿದ್ದ ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ನಾಳೆಯಿಂದ ದೇವಿ ದರ್ಶನಕ್ಕೆ ಅವಕಾಶ ನಿಡಲಾಗುತ್ತಿದೆ.
ಕೋವಿಡ್ ಮಾರ್ಗಸೂಚಿ ನಿಯಮ ವಿಧಿಸಿ ಯಲ್ಲಮ್ಮ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ದರ್ಶನ ಪಡೆಯುವಂತೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಮನವಿ ಮಾಡಿದ್ದಾರೆ.
ನಾಳೆಯಿಂದ ಯಲ್ಲಮ್ಮ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ