ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಒಂದುವರೆ ವರ್ಷದಿಂದ ಬಾಗಿಲು ಮುಚ್ಚಿದ್ದ ಸವದತ್ತಿ ಯಲ್ಲಮ್ಮ ರೇಣುಕಾದೇವಿ ದೇವಾಲಯ ಇಂದು ತೆರೆಯಲಾಗಿದ್ದು, ಭಕ್ತರಲ್ಲಿ ಸಂತಸ ಮನೆ ಮಾಡಿದೆ.
ಆಡಳಿತ ಮಂಡಳಿ ಇಂದು ಬೆಳಿಗ್ಗೆ 6:30ಕ್ಕೆ ಶಾಸ್ತ್ರೋಕ್ತವಾಗಿ ದೇವಸ್ಥಾನದ ಬಾಗಿಲನ್ನು ತೆರೆದಿದೆ.
ರೇಣುಕಾ ದೇವಿಗೆ ವಿಷೇಷ ಪೂಜೆ ನೆರವೇರಿಸಲಾಗಿದೆ. ದೇವಸ್ಥಾನದ ಬಾಗಿಲನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ.
ಕೋವಿಡ್ ನಿಯಮಗಳನ್ನು ಪಾಲಿಸಿ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರುವ ಬರುವ ನಿರೀಕ್ಷೆ ಇದೆ.
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದುವರೆ ವರ್ಷದಿಂದ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ಕೋವಿಡ್ ಪ್ರಕರಣ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಇಂದಿನಿಂದ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಠಾತ್ ರಾಜಿನಾಮೆ ನೀಡಿದ ಮಾಜಿ ಶಾಸಕ ; ಕಾಂಗ್ರೆಸ್ ನತ್ತ ಮುಖ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ