Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಶಾಲಾ ವಾಹನ ಪಲ್ಟಿ; ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶಾಲಾ ವಾಹನ ಪಲ್ಟಿಯಾಗಿ ರಸ್ತೆ ಪಕ್ಕದಲ್ಲಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹಾರೋಗೊಪ್ಪ ಬಳಿ ನಡೆದಿದೆ.

ಅದೃಷ್ಟವಶಾತ್ ಶಾಲಾ ವಾಹನದಲ್ಲಿದ್ದ 35 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Home add -Advt

ಮರಕುಂಬಿಯ ಗಣಾಚಾರಿ ಶಿಕ್ಷಣ ಸಂಸ್ಥೆಗೆ ಸೇರಿದ್ದ ಶಾಲಾ ವಾಹನ ಇದಾಗಿದ್ದು, ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ರಸ್ತೆ ಪಕ್ಕದ ಖಾಲಿ ಜಾಗದಲ್ಲಿ ಬಿದ್ದಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button