
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ನಾಳೆ ಜೈ ಬಾಪು, ಜೈ ಭೀಮ್, ಜೈ ಸಂವಿದಾನ ಕಾಂಗ್ರೆಸ್ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಲಕ್ಷಾಂತರ ಜನರು, ಗಣ್ಯರು ಸಮಾವೇಶದಲ್ಲಿ ಭಾಗವಹಿಸುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.