
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಡಿಸೆಂಬರ್ 4ರಿಂದ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಡಿ.4ರಿಂದ 15ವರೆಗೆ ವಿಧಾನಮಂಡಲ ಅಧಿವೇಶನ ಸುವರ್ಣಸೌಧದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೇಗೆ ತಯಾರಿ ನಡೆಸಿದ್ದಾರೆ ಎಂದು ಮಾಹಿತಿ ಪಡೆದಿದ್ದೇನೆ ಎಂದರು.
3500 ಪೊಲೀಸ್ ಸಿಬ್ಬಂದಿಗಳನ್ನು ಸುವರ್ಣವಿಧಾನಸೌಧದ ಭದ್ರತೆಗೆ ನಿಯೋಜಿಸಲಾಗಿದೆ. ಬೇರೆ ಬೇರೆ ಜಿಲ್ಲೆಗಳಿಂದ ಬರುವ ಸಿಬ್ಬಂದಿಗೆ ಎಲ್ಲ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ. ಊಟ, ವಸತಿ ವ್ಯವಸ್ಥಿತವಾಗಿ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದರು.
ಭದ್ರತೆ, ಆಂತರಿಕ ವಿಚಾರ ಸೇರಿದಂತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.