
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡ ಬಾವುಟ ಸುಟ್ಟು ಅವಮಾನ ಮಾಡಿರುವುದು ಅತ್ಯಂತ ಖಂಡನೀಯವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರಗಳನ್ನು ಒತ್ತಾಯಿಸುವ ನಿರ್ಣಯನ್ನು ವಿಧಾನ ಸಭೆಯಲ್ಲಿಂದು ಕೈಗೊಳ್ಳಲಾಯಿತು.
ಶೂನ್ಯ ವೇಳೆಯಲ್ಲಿ ಶಾಸಕರಾದ ಅನ್ನದಾನಿ, ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪುಂಡರು ಕನ್ನಡ ಬಾವುಟ ಸುಟ್ಟು ಹಾಕಿರುವುದನ್ನು ಖಂಡಿಸಿ ಖಂಡನಾ ನಿರ್ಣಯ ಮಂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ ಇದೊಂದು ಗಂಭೀರ ವಿಚಾರವಾಗಿದೆ. ಮಹಾರಾಷ್ಟ್ರ ನೆಲದಲ್ಲಿ ಕನ್ನಡ ಬಾವುಟ ಸುಟ್ಟಿರುವುದು ಕನ್ನಡಿಗರಿಗೆ ನೋವು ತಂದಿದೆ. ನೆಲ, ಜಲ, ಭಾಷೆಯ ರಕ್ಷಣೆಯ ವಿಚಾರದಲ್ಲಿ ಸರ್ಕಾರ ಸದಾ ಬದ್ಧವಾಗಿದ್ದು, ಈ ಘಟನೆಗೆ ಕಾರಣವಾದ ಪುಂಡರನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ನಿರ್ಣಯ ಕೈಗೊಳ್ಳುವ ಜೊತೆಗೆ ಮಹಾರಾಷ್ಟ್ರ ಸರ್ಕಾರದ ಜೊತೆಗೆ ಚರ್ಚಿಸಲಾಗುವುದು ಎಂದರು.
ಇಂತಹ ಘಟನೆಗಳು ಮತ್ತೆ ಮತ್ತೆ ಪುನರಾವರ್ತನೆಯಾಗುತ್ತಿದ್ದು, ಎರಡು ಭಾಷಿಕರ ನಡುವೆ ಸೌಹಾರ್ದ ವಾತಾವರಣ ಕದಡುವ ಪ್ರಯತ್ನ ಸಹಿಸುವುದಿಲ್ಲ ಎಂದು ಸಚಿವರು ಹೇಳಿದರು.
ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಶಾಸಕರಾದ ಶಿವಲಿಂಗೇಗೌಡ, ಬಾಲಕೃಷ್ಣ ಮತ್ತಿತರರು ಸಹ ಖಂಡನಾ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.
ಮೂರು ಮಹತ್ವದ ವಿಧೇಯಕಗಳ ಮಂಡನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ