Belagavi NewsBelgaum NewsKannada NewsKarnataka NewsLatestPolitics

*ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

ಗೃಹಸಚಿವ ಡಾ:ಜಿ.ಪರಮೇಶ್ವರ್ ಅವರು ಈ ವಿಧೇಯಕವು ವ್ಯಕ್ತಿ ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ. ವಿಧೇಯಕವನ್ನು ಪರ್ಯಾಲೋಚಿಸಿ ಅನುಮೋದನೆ ನೀಡುವಂತೆ ಕೋರಿದರು. ವಿಧೇಯಕವು ವಿಧಾನಸಬೆಯಲ್ಲಿ ಅಂಗೀಕಾರವಾಯಿತು.

Home add -Advt

Related Articles

Back to top button