
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯ ಪಾಲಿಕೆ ಮುಂದೆ ಭಗವಾ ಧ್ವಜಸ್ತಂಭ ನೆಡುವುದಾಗಿ ಹೇಳಿ ಗಡಿ ಪ್ರವೇಶಿಸಲು ಯತ್ನಿಸಿದ್ದಲ್ಲದೇ ನಾಡದ್ರೋಹಿ ಘೋಷಣೆಗಳನ್ನು ಕೂಗಿದ್ದಾರೆ.
ಶಿವಸೇನೆ ಕಾರ್ಯಕರ್ತರ ಪುಂಡಾಟ ತಡೆಯಲು ಮುಂದಾದ ಪೊಲೀಸರ ಮೇಲೆಯೇ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಗಡಿ ಭಾಗದಲ್ಲಿ ಪೊಲೀಸರು ಶಿವಸೇನೆ ಕಾರ್ಯಕರ್ತರ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಇದರಿಂದ ರೊಚ್ಚಿಗೆದ್ದ ಶಿವಸೇನೆ ಕಾರ್ಯಕರ್ತರು, ಪೊಲೀಸರೊಂದಿಗೆ ವಾಗ್ವಾದಕ್ಕಿಳುದು, ಪೊಲೀಸರನ್ನೇ ತಳ್ಳಿ ಮುನ್ನುಗ್ಗಲು ಯತ್ನಿಸಿದ್ದಾರೆ.
ಪೊಲೀಸರು ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದ್ದು, ಬೆಳಗಾವಿಯಲ್ಲಿ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ