ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರೈಲು ಚಲಿಸಿದ ಕೆಲ ಹೊತ್ತಲ್ಲೇ ರೈಲ್ವೆ ಟ್ರಾಕ್ ಬಳಿ ಭಾರೀ ಭೂ ಕುಸಿತವುಂಟಾಗಿರುವ ಘಟನೆ ಬೆಳಗಾವಿಯ ಶಿವಥಾಣಾ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೀಗ ಶಿವಥಾಣ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಟ್ರ್ಯಾಕ್ ಪಕ್ಕದಲ್ಲೇ ಭೂಮಿ ಕುಸಿದಿದೆ. ರೈಲು ಚಲಿಸಿ ಒಂದು ಗಂಟೆಯಲ್ಲಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಭಾರೀ ಮಳೆಗೆ ಒಂದೆಡೆ ಪಾಂಡ್ರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಡೆಗೋಡೆ ಕೂಡ ನೀರಿನಲ್ಲಿ ಕೊಚ್ಚಿ ಹೋಗಿದೆ. ಇನ್ನೊಂದೆದೆ ರೈಲ್ವೆ ಟ್ರ್ಯಾಕ್ ಬಳಿ ಭೂಮಿ ಕುಸಿತಗೊಂಡಿದೆ. ಪ್ರಸ್ತುತ ಈ ಭಾಗದಲ್ಲಿ ರೈಲ್ವೆ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸ್ಥಳಕ್ಕೆ ರೈಲ್ವೆ ಅಧಿಕಾರಿಗಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ