Kannada NewsLatest
ಹಣದ ಆಮಿಷ ನೀಡಿದ್ದು ನಿಜ; ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಾಸಕ ಶ್ರೀಮಂತ ಪಾಟೀಲ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿಗೆ ಬರಲು ಪಕ್ಷದಿಂದ ನನಗೆ ಹಣದ ಆಫರ್ ನೀಡಿದ್ದು ನಿಜ ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ಶ್ರೀಮಂತ ಪಾಟೀಲ್ ತಿಳಿಸಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಬಾಯ್ಬಿಟ್ಟಿರುವ ಶಾಸಕ ಶ್ರೀಮಂತ ಪಾಟೀಲ್, ಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ನೀಡಿದ್ದರು. ಯಾವುದೇ ಹಣ ನನಗೆ ಬೇಡ, ಬಿಜೆಪಿಗೆ ಬರುತ್ತೇನೆ. ಒಳ್ಳೆಯ ಸ್ಥಾನ ನನಗೆ ಬೇಕು. ಹಣದ ಬದಲಾಗಿ ಕ್ಷೇತ್ರದ ಜನರ ಸೇವೆ ಮಾಡುವ ನಿಟ್ಟಿನಲ್ಲಿ ಯೋಗ್ಯ ಸ್ಥಾನಮಾನ ನೀಡುವಂತೆ ಕೇಳಿದ್ದೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದರೆ ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಆ ವೇಳೆ ಸಚಿವ ಸ್ಥಾನ ನೀಡುವ ಬಗ್ಗೆ ನಾಯಕರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.




