ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ ಸೂಚನೆ ನೀಡಿದ್ದಾರೆ.
ಕಾಮಗಾರಿಗಳು ನಡೆಯುತ್ತಿರುವ ಕೆಲ ಸ್ಥಳಗಳಲ್ಲಿ ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಮಳೆಯಾಗುತ್ತಿರುವುದರಿಂದ ಕಾಮಗಾರಿ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಧರ್ಮನಾಥ ವೃತ್ತ, ರಾಮದೇವ ಹೋಟೆಲ್ ರಸ್ತೆ, ಶಹಾಪುರ ಮತ್ತಿತತ ಕಡೆಗಳಲ್ಲಿ ಶುಕ್ರವಾರ(ಜು.23) ಅವರು ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.
ಪ್ರತಿಯೊಂದು ಕಾಮಗಾರಿ ಸ್ಥಳದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಗುತ್ತಿಗೆದಾರರು ಹಾಗೂ ಸ್ಮಾರ್ಟ್ ಸಿಟಿ ಯೋಜನೆಯ ಎಂಜಿನಿಯರ್‌ಗಳು ಈಗಾಗಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ ಬಾಗೇವಾಡಿ ತಿಳಿಸಿದ್ದಾರೆ.
ಹಳ್ಳ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಬಾಲಕಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ