Karnataka NewsLatest

*ಹಾವು ಕಚ್ಚಿ ಪತಿ ಸಾವು, ಪತ್ನಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮನೆಯಲ್ಲಿ ಮಲಗಿದ್ದ ದಂಪತಿಗೆ ಹಾವು ಕಚ್ಚಿದ್ದು ಪತಿ ಮೃತಪಟ್ಟು ಪತ್ನಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಇಲ್ಲಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಮೂಲದ ಸಿದ್ದಪ್ಪ ಚಿವಟಗುಂಡಿ (35) ಹಾಗೂ ಅವರ ಪತ್ನಿ ನಾಗವ್ವ (28) ಅವರಿಗೆ ಹಾವು ಕಚ್ಚಿದೆ. ಸಿದ್ದಪ್ಪ ಮೃತಪಟ್ಟಿದ್ದು. ನಾಗವ್ವ ಅವರ ಸ್ಥಿತಿ ಗಂಭೀರವಾಗಿದೆ.


ದಂಪತಿ ಸಾಣೆಕೊಪ್ಪದಿಂದ ಬೆಳಗಾವಿಗೆ ಬಂದು ವಾಸವಾಗಿದ್ದರು. ಮೃತ ಸಿದ್ದಪ್ಪ ಅವರು ವಡಗಾವಿಯ ಕಟ್ಟಡ ಕಾಮಗಾರಿಯೊಂದರಲ್ಲಿ ವಾಚ್‍ಮನ್ ಆಗಿ ಕೆಲಸ ಮಾಡುತ್ತಿದ್ದರು.

Home add -Advt

ಶನಿವಾರ ರಾತ್ರಿ ಈ ದಂಪತಿ ಮೂವರು ಮಕ್ಕಳೊಂದಿಗೆ ಊಟ ಮಾಡಿ ಮಲಗಿದ್ದರು. ಬೆಳಗಿನಜಾವ ನಿದ್ದೆಯಲ್ಲಿದ್ದಾಗ ಹಾವು ಕಚ್ಚಿದೆ. ವಿಷವೇರಿದ ಪರಿಣಾಮ ತಂದೆ, ತಾಯಿ ಒದ್ದಾಡುತ್ತಿರುವುದನ್ನು ಕಂಡು ಮಕ್ಕಳು ಎಚ್ಚರಗೊಂಡಿದ್ದಾರೆ. ಬಳಿಕ ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಲಾಗಿ ಹಾವು ಕಚ್ಚಿರುವುದು ಗೊತ್ತಾಗಿದೆ. ದಂಪತಿಯನ್ನು ಸ್ಥಳೀಯರ ನೆರವಿನಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸಿದೆ ಸಿದ್ದಪ್ಪ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button