Kannada NewsLatest

ಜಲಸಂಪನ್ಮೂಲ ಖಾತೆ ಬಾಲಚಂದ್ರ ಜಾರಕಿಹೊಳಿಗೆ ನೀಡಲಿ; ಸಚಿವ ಶ್ರೀಮಂತ ಪಾಟೀಲ್ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣದ ಬಗ್ಗೆ ಶೀಘ್ರವೇ ತನಿಖೆಯಾಗಲಿ. ಸತ್ಯಾಸತ್ಯತೆ ಹೊರಬರಲಿ ಎಂದು ಸಚಿವ ಶ್ರೀಮಂತ ಪಾಟೀಲ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಶ್ರೀಮಂತ ಪಾಟೀಲ್, ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಲಾಗಿದೆ. ಶೀಘ್ರದಲ್ಲಿಯೇ ತನಿಖೆ ಆರಂಭವಾಗಲಿ. ಇದೊಂದು ನಕಲಿ ಸಿಡಿ ಎಂದು ರಮೇಶ್ ಜಾರಕಿಹೊಳಿ ಅವರೇ ಹೇಳುತ್ತಿದ್ದಾರೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು.

Home add -Advt

ಇನ್ನು ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ತೆರವಾಗಿರುವ ಜಲಸಂಪನ್ಮೂಲ ಖಾತೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿಗೆ ವಹಿಸಲಿ. ಈ ಭಾಗದ ಸಾಕಷ್ಟು ನಿರಾವರಿ ಯೋಜನೆಗಳು ಅರ್ಧಕ್ಕೆ ನಿಂತಿದ್ದು, ಅವುಗಳು ಪೂರ್ಣಗೊಳ್ಳುವ ಅಗತ್ಯವಿದೆ ಹಾಗಾಗಿ ಬಾಲಚಂದ್ರ ಜಾರಕಿಹೊಳಿಗೆ ಖಾತೆ ವಹಿಸುವುದರಿಂದ ಜಿಲ್ಲೆಗೆ ಅನುಕೂಲವಾಗಲಿದೆ ಎಂದು ಹೇಳಿದರು.

Related Articles

Back to top button