Belagavi NewsBelgaum NewsEducationKarnataka NewsLatest
*ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ: ಬೆಳಗಾವಿಯ ಪ್ರಾರ್ಥನಾಗೆ 625ಕ್ಕೆ 625 ಅಂಕ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಫಲಿತಾಂಶ ಬಂದಿದ್ದು, ಪ್ರತಿಬಾರಿಯಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕಟಗೇರಿ ಸರ್ಕಾರಿ ಪ್ರೌಢಶಾಲೆಯ ಪ್ರಾರ್ಥನಾ ನಾಗಪ್ಪ ಬಿರಾದಾರ ಪಾಟೀಲ್ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೂರ್ಣ ಅಂಕ (625/ 625) ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ರಾಜ್ಯದ ಪಟ್ಟಿಯಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ 18ನೇ ಸ್ಥಾನ ಪಡೆದಿದ್ದು ಶೇ 94.75ರಷ್ಟು ಫಲಿತಾಂಶ ದಾಖಲಿಸಿದೆ. ಕಳೆದ ಬಾರಿ ಶೇ 80.48 ಫಲಿತಾಂಶದ ದಾಖಲಾಗಿತ್ತು. ಈ ಬಾರಿ ಶೇ 14.27ರಷ್ಟು ಹೆಚ್ಚು ಸುಧಾರಣೆ ಆಗಿದೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಶೇ 94.04 ಫಲಿತಾಂಶದೊಂದಿಗೆ 14ನೇ ಸ್ಥಾನ ಗಿಟ್ಟಿಸಿದೆ. ಕಳೆದ ವರ್ಷ ಶೇ 79.94 ಫಲಿತಾಂಶ ಪಡೆದಿತ್ತು. ಈ ಬಾರಿ 14.15 ಶೇಕಡಾ ಸುಧಾರಣೆ ಕಂಡಿದೆ.




