Uncategorized

*ಬೆಳಗಾವಿ ಪಾಲಿಕೆ: ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ವಿವಿಧ ಇಲಾಖೆಯ ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಶನಿವಾರ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಹಾಗೂ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಸ್ಥಾಯಿ ಸಮಿತಿಯ ಫಾರ್ಮೂಲಾಗೆ ಹೊಂದಾಣಿಕೆ ಮಾಡಿಕೊಂಡು ವಿವಿಧ ಇಲಾಖೆಯ ಸ್ಥಾಯಿ ಸಮಿತಿ ಚುನಾವಣೆ ಅವಿರೋಧವಾಗಿ ಆಯ್ಕೆಯಾಗಿದೆ.

ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು 5 ಪ್ಲಸ್ 2 ಸೂತ್ರ ಪಾಲನೆ ಮಾಡಿದೆ.

ತೆರಿಗೆ, ಹಣಕಾಸು ಮತ್ತು ಅಪೀಲುಗಳ ಸಮಿತಿ, 2 ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, 3 ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ, 4. ಲೆಕ್ಕಗಳ ಸ್ಥಾಯಿ ಸಮಿತಿ ಗೆ ಅವಿರೋಧ ಆಯ್ಕೆಯಾಗಿದೆ.

ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣೆಗೆ ಬಿಜೆಪಿ ಸಂಸದರಾದ ಮಂಗಲಾ ಅಂಗಡಿ, ಅಣ್ಣಾಸಾಹೇಬ್ ಜೋಲ್ಲೆ, ಶಾಸಕ ಅಭಯ ಪಾಟೀಲ ಭಾಗಿಯಾಗಿದ್ದರು‌.

ಆಡಳಿತ ರೂಢ ಬಿಜೆಪಿಗೆ ಪ್ರತಿ ಸ್ಥಾಯಿ ಸಮಿತಿಯಲ್ಲಿ 5 ಸದಸ್ಯರು ಆಯ್ಕೆಯಾಗಿದ್ದರೆ ಇತ್ತ ಕಾಂಗ್ರೆಸ್, ಪಕ್ಷೇತರ, ಎಂಇಎಸ್ ಸೇರಿ ಸ್ಥಾನ ಹಂಚಿಕೆಯಾಗಿದೆ.

ಪ್ರತಿ ಸ್ಥಾಯಿ ಸಮಿತಿಯಲ್ಲಿ ವಿಪಕ್ಷಕ್ಕೆ 2 ಸ್ಥಾನ ಬಿಟ್ಟು ಕೊಡುವಂತೆ ಒಪ್ಪಂದವಾಗಿತ್ತು. ಅದರಂತೆ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button