Belagavi NewsBelgaum News

*ಬೆಳಗಾವಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಯಿ ದಾಳಿಯಿಂದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿಯ ನ್ಯೂ ಗಾಂಧಿ ನಗರದಲ್ಲಿ ಈ ಘಟನೆ ನಡೆದಿದೆ. ಬೀದಿನಾಯಿಗಳು ಪುಟ್ಟ ಮಕ್ಕಳ ಬೆನ್ನು, ತಲೆ ಭಾಗಕ್ಕೆ ಕಚ್ಚಿ ಗಾಯಗೊಳಿಸಿವೆ. ಗಾಯಾಳು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ಕು ವರ್ಷದ ಮೊಹಮ್ಮದ್ ಕೈಫ್, ಹಜಲ್ ಗಾಯಾಳು ಮಕ್ಕಳು.

ಕಳೆದ ಒಂದು ವಾರದಲ್ಲಿ 7 ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಬೀದಿನಾಯಿಗಳಿಂದಾಗಿ ಮಕ್ಕಳು, ಪೋಷಕರು ಆತಂಕದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Related Articles

Back to top button