ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಜಿಲ್ಲಡಳಿತಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುಖ್ಯಸ್ಥ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ಕನ್ನಡ ಬಾವುಟ ಹಾರಿಸಿದ್ದಕ್ಕೆ ಹಲ್ಲೆಯಾಗುತ್ತೆ ಎನ್ನುವುದಾದರೆ ನಾವು ಬೆಳಗಾವಿಗೆ ಹೋಗಿ ಸಾವಿರಾರು ಕನ್ನಡ ಬಾವುಟಗಳನ್ನು ಹಾರಿಸುತ್ತೇವೆ. ಯಾವ ಅಧಿಕಾರಿ ತಡೆಯುತ್ತಾನೋ ನೋಡೋಣ. ನಮ್ಮ ನೆಲದಲ್ಲಿ ಕನ್ನಡ ಬಾವುಟ ಹಾರಿಸಲು ಯಾರ ಅಪ್ಪಣೆ ಬೇಕಿಲ್ಲ ಎಂದು ಗುಡುಗಿದ್ದಾರೆ.
ಯುವಕನ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಿ. ಕೂಡಲೇ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಿ. ಕ್ರಮ ಜರುಗಿಸದಿದ್ದರೆ ಕರವೇ ಕಾರ್ಯಕರ್ತರು ಬೆಳಗಾವಿಗೆ ಪ್ರವೇಶಿಸುತ್ತಾರೆ. ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ವಾರ್ನಿಂಗ್ ನೀಡಿದ್ದಾರೆ.
ಪಾರಿವಾಳ ಹಿಡಿಯಲು ಹೋದ ಬಾಲಕರು; ಕರೆಂಟ್ ಶಾಕ್ ಹೊಡೆದು ಗಂಭೀರ
https://pragati.taskdun.com/pigeonelectrick-shocktwo-boyscriticalbangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ