Kannada NewsLatest

ಬೆಳಗಾವಿಯಲ್ಲಿ ಘೋರ ಕೃತ್ಯ; ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯನ್ನೇ ಕೊಂದ ಕಿರಾತಕ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಳಗಾವಿಯ ರಾಯಭಾಗದಲ್ಲಿ ನಡೆದಿದೆ.

ಆರೋಪಿ ಅಮೀರ್ ದಾರ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಆರೋಪಿ ಯುವತಿಗೆ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿ ಪೀಡಿಸುತ್ತಿದ್ದ. ಯುವತಿ ನಿರಾಕರಿಸಿದ್ದಾಳೆ. ಟ್ಯೂಷನ್ ಮುಗಿಸಿ ಶಿಕ್ಷಕರ ಮನೆಯಿಂದ ವಾಪಸ್ ಅಗುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಡಾಮಿನೋಸ್ ವ್ಯವಸ್ಥಾಪಕನಿಂದ ಮಹಿಳಾ ಸಹೋದ್ಯೋಗಿ ಮೇಲೆ ಹಲ್ಲೆ

Related Articles

Back to top button