Latest

ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿದ್ಯಾರ್ಥಿಗಳ ಆನ್ ಲೈನ್ ಕ್ಲಾಸ್ ಅನುಕೂಲಕ್ಕಾಗಿ ಉಚಿತ ಟ್ಯಾಬ್ಲೆಟ್ ವಿತರಣೆ ಮಾಡಲಾಗುತ್ತಿದೆ. ಮಕ್ಕಳು ಟ್ಯಾಬ್ ಬಳಕೆಯ ಮೂಲಕ ಹೆಚ್ಚಿನ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಗೃಹದಲ್ಲಿ ಬುಧವಾರ (ಜೂನ್.23) ಟ್ಯಾಬ್ಲೆಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆನ್ಲೈನ್ ಕ್ಲಾಸ್ ಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋರೊನ ಸಂಕಷ್ಟ ಕಾಲದಲ್ಲಿಯೂ ಟ್ಯಾಬ್ ವಿತರಣೆ ಮಾಡುವ ಸರ್ಕಾರದ ಯೋಜನೆ ಮಹತ್ವದಾಗಿದೆ. ರಾಜ್ಯದಲ್ಲಿ 430 ಕಾಲೇಜು ಹಾಗೂ ಜಿಲ್ಲೆಯಲ್ಲಿ 22 ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಒಟ್ಟು 6020 ವಿದ್ಯಾರ್ಥಿಗಳಿಗೆ ಸುಮಾರು 14 ಸಾವಿರ ಆಂದಾಜು ಮೊತ್ತದ ಟ್ಯಾಬ್ ವಿತರಿಸಲಾಗುತ್ತಿದೆ. ಕೋವಿಡ್ ಇರುವ ಕಾರಣ ಮಕ್ಕಳು ಮನೆಯಲ್ಲಿ ಆನ್ಲೈನ್ ಕ್ಲಾಸ್ ಸದುಪಯೋಗ ಪಡಿಸಿಕೊಳ್ಳಬೇಕು. ಈ ಸಂದರ್ಭದಲ್ಲಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದ್ದು, ಟ್ಯಾಬ್ ಬಳಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು ಎಂದು ವಿಧ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಳೆದ ವರ್ಷ ಲ್ಯಾಪ್ ಟ್ಯಾಪ್ ವಿತರಣೆ ಮಾಡಲಾಗಿತ್ತು ಆದರೆ ಈ ವರ್ಷ ಮತ್ತೆ ಕೋವಿಡ್ ಸಂಕಷ್ಟ ಎದುರಾಗಿದ್ದು, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು.

ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿಗಳಾದ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್. ವಿ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲರಾದ ಪ್ರೊ. ಸಿ. ಈಶ್ವರಚಂದ್ರ ಸ್ವಾಗತಿಸಿದರು, ಪ್ರೊ. ಮಂಜುನಾಥ ಪೂಜೇರಿ ನಿರೂಪಿಸಿ ವಂದಿಸಿದರು.
ಸಿಡಿ ಕೇಸ್: ಯುವತಿಗೆ ಬಂಧನ ಭೀತಿ…!

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button