
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; 9 ಎಕರೆಯಷ್ಟು ಕಬ್ಬು ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಬೆಳೆಗೆ ಬೆಂಕಿ ಬಿದ್ದಿದ್ದು, 9 ಎಕರೆಯಷ್ಟು ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ. ಶಿವನಗೌಡ ಪಾಟೀಲ್ ಎಂಬುವವರಿಗೆ ಸೇರಿದ 6 ಎಕರೆ, ಮಾಬು ಸುಭಾವಿ ಎಂಬುವವರಿಗೆ ಸೇರಿದ 2 ಎಕರೆ ಹಾಗೂ ದಸಕೀರಸಾಬ್ ಎಂಬುವವರಿಗೆ ಸೇರಿದ 1 ಎಕರೆ ಕಬ್ಬು ಬೆಳೆ ನಾಶವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ