
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆ ಸುಲ್ತಾನ್ ಪುರ ಗ್ರಾಮದಲ್ಲಿ 14 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಗ್ರಾಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಉತ್ಸವ ನಡೆಸಲಾಗಿತ್ತು. ಉತ್ಸವದಲ್ಲಿ ನೂರಾರು ಜನರು ಪಾಲ್ಗೊಂಡಿದ್ದಲ್ಲದೇ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಆಗಲಿ ಧರಿಸಿರಲಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು.
ಇದರ ಬೆನ್ನಲ್ಲೆ ಎಚ್ಚೆತ್ತ ಜಿಲ್ಲಾಡಳಿತ ಸುಲ್ತಾನ್ ಪುರ ಗ್ರಾಮದಲ್ಲಿ 14 ದಿನಗಳ ಕಠಿಣ ಲಾಕ್ ಡೌನ್ ಜಾರಿ ಮಾಡಿದೆ.
ಕ್ಷೇತ್ರಾದ್ಯಂತ ವ್ಯಾಕ್ಸಿನೇಶನ್, ಕೋವಿಡ್ ಟೆಸ್ಟಿಂಗ್ ವ್ಯವಸ್ಥೆ ಪರಿಶೀಲಿಸುತ್ತಿರುವ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ