Kannada NewsKarnataka NewsLatest

*5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲಾ ಬಾಲಭವನ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ೦೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗಾಗಿ ೧೫ ದಿನಗಳ ಉಚಿತ ಬೇಸಿಗೆ ಶಿಬಿರವನ್ನು ಮೇ.೧೬ ೨೦೨೩ ರಿಂದ ಮೇ.೩೦ ರವರೆಗೆ ಬೆಳಿಗ್ಗೆ ೧೦ ರಿಂದ ಸಂಜೆ ೪ಗಂಟೆಯವರೆಗೆ ಆಯೋಜಿಸಲಾಗಿದೆ.

ಶಿಬಿರದಲ್ಲಿ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅನುಕೂಲವಾಗುವ ಉಪನ್ಯಾಸ, ಚಿತ್ರಕಲೆ, ಕರಕುಶಲ ಕಲೆ, ಜೇಡಿ ಮಣ್ಣಿನ ಕಲೆ, ಸಮೂಹ ನೃತ್ಯ, ಸಮೂಹ ಗೀತೆ, ಯೋಗ, ಕರಾಟೆ ಆಯೋಜಿಸಲಾಗುವುದು. ಶಿಬಿರವು ಕಣಬರ್ಗಿ ರಸ್ತೆಯ ಭಾರತ ಕಾಲೋನಿಯಲ್ಲಿರುವ ಮಹಿಳಾ ಕಲ್ಯಾಣ ಸಂಸ್ಥೆಯ ಸಭಾಗೃಹದಲ್ಲಿ ಜರುಗುವುದು.

ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಮೇ.೧೫ ೨೦೨೩ ರ ಸಂಜೆ ೫ ಗಂಟೆಯೊಳಗೆ ಹೆಸರು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಎಮ್. ಎಸ್. ಚೌಗಲಾ, ದೂರವಾಣಿ ಸಂಖ್ಯೆ: ೯೬೬೩೨೧೮೮೬೦ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

https://pragati.taskdun.com/vidhanasabha-electionvotinggovt-holiday/


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button