Kannada NewsLatest

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ; ಸಚಿವ ಸುನೀಲ್ ಕುಮಾರ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಈ ಬಾರಿ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್, ಹಲವು ಆಸೆ ಆಮಿಷಗಳನ್ನು ಒಡ್ಡಿ, ಪಿತೂರಿ ನಡೆಸಿ ಮತಾಂತರ ಮಾಡಲಾಗುತ್ತಿದೆ. ಬಲವಂತದ ಮತಾಂತರ ನಡೆಯಬಾರದು. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ರೂಪಿಸಬೇಕು ಎಂಬುದು ರಾಜ್ಯ ಬಿಜೆಪಿ ಹಾಗೂ ಸರ್ಕಾರದ ಹಲವು ದಿನಗಳ ಯೋಚನೆಯಾಗಿತ್ತು. ಇದೀಗ ಬೆಳಗಾವಿ ಅಧಿವೇಶನದಲ್ಲಿ ಈ ನಿಟ್ಟಿನಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಮಾಡಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಲವ್ ಜಿಹಾದ್ ತಡೆಗೂ ಕಾನೂನು ತರಲಾಗುತ್ತದೆ. ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಿರಲು ಕಾರಣವೇನು ಎಂಬುದನ್ನು ಸದನದಲ್ಲಿ ಹೆಳಲಿ. ನಾವು ಕೂಡ ಸಮರ್ಪಕವಾಗಿ ಉತ್ತರ ಕೊಡಲು ಸಿದ್ಧರಿದ್ದೇವೆ ಎಂದು ಹೇಳಿದರು.
ಮತಾಂತರ ನಿಷೇಧ ಕಾಯ್ದೆ ಮಂಡನೆ; ಸಿಎಂ ಬೊಮ್ಮಾಯಿ ಹೇಳಿದ್ದೇನು?

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button