*ಬೆಳಗಾವಿ ಸುವರ್ಣಸೌಧದಲ್ಲಿ ಭಾರಿ ಹೈಡ್ರಾಮ: ಕಾರಿಡಾರ್ ನಲ್ಲೇ ಧರಣಿ ಕುಳಿತ ಸಿ.ಟಿ.ರವಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸುವರ್ಣಸೌಧದಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಬಿಜೆಪಿ ಎಂಎಲ್ ಸಿ ಸಿ.ಟಿ,ರವಿ ಸುವರ್ಣ ಸೌಧದ ಕಾರಿಡಾರ್ ನಲ್ಲೇ ಧರಣಿ ಕುಳಿತಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಬಳಿಕ ಸಿ.ಟಿ.ರವಿ ವಿರುದ್ಧ ಹೆಬ್ಬಾಳಕರ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರ ವಿರುದ್ಧ ಧರಣಿ ನಡೆಸುತ್ತಿದ್ದಾರೆ.
ಸುವರ್ಣಸೌಧದ ಮೊಗಸಾಲೆಯಲ್ಲಿ ಧರಣಿ ಕುಳಿತಿರುವ ಸಿ.ಟಿ,ರವಿ ಅವರಿಗೆ ಶಾಸಕ ಅಶ್ವತ್ಥನಾರಾಯಣ ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಿ.ಟಿ.ರವಿ, ನಾನು ವಿಧಾನಪರಿಷತ್ ಕಲಾಪದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಏಕಾಏಕಿ ಕೆಲವರು ಸುವರ್ನಸೌಧದ ಮೊಗಸಾಲೆಗೆ ನುಗ್ಗಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೆಸರು ಹೇಳಿ ನನ್ನ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾರೆ. ಅವಾಚ್ಯವಾಗಿ ನಿಂದಿಸಿದ್ದಾರೆ. ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಒಬ್ಬ ಶಾಸಕನಿಗೆ ವಿಧಾನಸೌಧದಲ್ಲಿ ರಕ್ಷಣೆ ಇಲ್ಲ ಎಂದ ಮೇಲೆ ಜನಸಾಮಾನ್ಯರನ್ನು ಹೇಗೆ ರಕ್ಷಿಸುತ್ತಾರೆ. ಇಲ್ಲಿ ಕಾನೂನು ಸುವ್ಯವಸ್ಥೆ ಎಂಬುದು ಇಲ್ಲ. ಸಚಿವರು ನನ್ನವಿರುದ್ಧ ಸುಳ್ಳು ಆರೋಪ ಮಾಡಿ ಇ ರೀತಿ ಗಾಲಾಟೆ ನಡೆಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ