ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಬ್ಬು ಬೆಳೆಗೆ ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಈ ನಡುವೆ ಸುವರ್ಣಸೌಧ ಮುಂಭಾಗ ರೈತ ಮುಖಂಡ ಚೂನಪ್ಪ ಪೂಜಾರಿ, ರಾಘವೇಂದ್ರ ನಾಯಕ್ ನೇತೃತ್ವದಲ್ಲಿ ಕಬ್ಬು ಬೆಳೆ ಬಾಕಿ ಬಿಲ್ ಪಾವತಿಸಲು ಅಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮನವೊಲಿಕೆ ಯತ್ನ ನಡೆಸಿದ್ದಾರೆ. ಆದರೆ ರೈತರು 1500 ಕೋಟಿ ಕಬ್ಬಿನ ಬಿಲ್ ಬಾಕಿಯಿದೆ. ಈ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಲು ಬಂದಿದ್ದೇವೆ ಅವಕಾಶ ನೀಡಿ ಎಂದು ಕೇಳಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ಆರಂಭವಾಗಿದೆ. ಪ್ರತಿಭಟನಾ ನಿರತ ರೈತರನ್ನು ಹಿರೇಬಾಗೇವಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಮ್ಸ್ ಗೆ ಚಿಕಿತ್ಸೆ ನೀಡಲು ಇಂದು ಬೆಳಗಾವಿಗೆ ಯಡಿಯೂರಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ