ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಬೆನ್ನಲ್ಲೇ ಬೆಳಗಾವಿ ಸುವರ್ಣ ಸೌಧದ ಬಳಿ ಹೈಡ್ರಾಮಾ ನಡೆದಿದೆ. ಒಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು ಸಿ.ಟಿ.ರವಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸುವರ್ಣ ಸೌಧದ ಕಾರಿಡಾರ್ ನಲ್ಲಿ ಸಿ.ಟಿ.ರವಿ ಧರಣಿ ನಡೆಸಿದ್ದಾರೆ.
ಸುವರ್ಣಸೌಧದ ಬಳಿ ಜಮಾವಣೆಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು, ಸಿ.ಟಿ.ರವಿ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಲ ಬೆಂಬಲಿಗರು ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳದಲ್ಲಿ ಕ್ಷಣ ಕ್ಷಣಕ್ಕೂ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ಸುವರ್ಣ ಸೌಧದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಕಮಿಷ್ನರ್ ಸ್ಥಳದಲ್ಲೇ ಬಿಡು ಬಿಟ್ಟಿದ್ದಾರೆ. ಇನ್ನೊಂದೆಡೆ ಸುವರ್ಣ ಸೌಧದ ಎಲ್ಲಾ ಗೇಟ್ ಗಳನ್ನು ಬಂದ್ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ