ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾ.12 ರಂದು ಬೆಳಿಗ್ಗೆ 10 ಗಂಟೆಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ದೇಶ್ಯಾದ್ಯಂತ 75 ನಗರ ಸ್ಥಳಗಳಲ್ಲಿ ಸ್ವಾತಂತ್ರೋತ್ಸವದ ವರ್ಚುವಲ್ ವೇದಿಕೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಕಾಂಗ್ರೆಸ್ ರಸ್ತೆಯಲ್ಲಿರುವ ವೀರಸೌಧ( ಕಾಂಗ್ರೆಸ್ ಬಾವಿ)ದಲ್ಲಿ ಮಾ.12 ರಂದು ಮಹಾತ್ಮಾ ಗಾಂಧೀಜಿ ಛಾಯಾಚಿತ್ರ ಪ್ರದರ್ಶನ ಹಾಗೂ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸ್ಪರ್ಧೆಗಳು 2 ವಿಭಾಗಗಳಲ್ಲಿ (ಕಿರಿಯರು ಹಾಗೂ ಹಿರಿಯರಿಗೆ) ದೇಶಭಕ್ತಿ ಗೀತೆ, ನೃತ್ಯ, ಚಿತ್ರಕಲಾ, ನಿಬಂಧ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯು ರಾಷ್ಟ್ರೀಯ ಏಕತೆ, ರಾಷ್ಟ್ರೀಯ ನಾಯಕರ ಹಿರಿಮೆ-ಗರಿಮೆ ಘಟನೆ ಒಳಗೊಂಡಿರಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ಹಾಗೂ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಜಗದೀಶ.ಕೆ.ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9606530074 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ