*ತಾರತಮ್ಯವಿಲ್ಲದ ಅಭಿವೃದ್ಧಿಯಿಂದ ಗ್ರಾಮ ಪಂಚಾಯಿತಿಗಳಿಗೆ ಗೌರವ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸರಕಾರದ ಯೋಜನೆಗಳನ್ನು ಮಧ್ಯವರ್ತಿಗಳಿದಲ್ಲದೆ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ವ್ಯವಸ್ಥೆ ತರಲಾಗಿದೆ. ಪಕ್ಷಾತೀತವಾಗಿ, ಜಾತ್ಯತೀತವಾಗಿ ಹಳ್ಳಿಗಳನ್ನು ಅಭಿವೃದ್ಧಿಪಡಿಸಿದಾಗ ಗ್ರಾಮ ಪಂಚಾಯಿತಿಗಳಿಗೆ ಗೌರವ ಬರಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ತಾರಿಹಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮ ಪಂಚಾಯತಿಯ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ನರೇಗಾದಂತಹ ಯೋಜನೆಗಳು ಬಂದ ನಂತರ ಗ್ರಾಮ ಪಂಚಾಯಿತಗಳು ಸದೃಢಗೊಂಡಿವೆ. ಇದು ಕಾಂಗ್ರೆಸ್ ಸರಕಾರದ, ಅಂದಿನ ಪ್ರಧಾನಿ ರಾಜೀವ ಗಾಂಧಿಯವರ ಕೊಡುಗೆಯಾಗಿದೆ. ಅದು ಸಾಕಾರಗೊಳ್ಳಲು ಯಾವುದೇ ತಾರತಮ್ಯವಿಲ್ಲದೆ ಅಭಿವೃದ್ಧಿಯಾಗಬೇಕಾಗಿದೆ ಎಂದು ಹೆಬ್ಬಾಳಕರ್ ತಿಳಿಸಿದರು.
ಬಡೇಕೊಳ್ಳಿಮಠದ ಶ್ರೀ ಸದ್ಗುರು ನಾಗೇಂದ್ರ ಮಹಾಸ್ವಾಮಿಗಳು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಮೋದ ಜಾಧವ್, ಎಸ್ ಟಿ ನಾಝರೆ, ಜ್ಯೋತಿ ಕಂಬಾರ, ನಾಗೇಂದ್ರ ನಿಲಜಕರ್, ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ