Cancer Hospital 2
Beereshwara 36
LaxmiTai 5

ಶಿಕ್ಷಕರು ಸಮಾಜಕ್ಕೆ ಮಾದರಿ: ಶಾಸಕ ಅನಿಲ ಬೆನಕೆ

ಮಕ್ಕಳಿಗೆ ಶಿಕ್ಷಕರು ತಂದೆ-ತಾಯಿಗಳಿದ್ದಂತೆ

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಪಾಠವನ್ನಷ್ಟೇ ಮಾಡದೇ ಕೋವಿಡ್-19 ಸಂಕಷ್ಟ ಕಾಲದಲ್ಲಿಯೂ ಕೂಡಾ ಮುಂದೆ ಬಂದು ಕೆಲಸ ಮಾಡುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕ ಅನಿಲ ಬೆನಕೆ ಅವರು ಹೇಳಿದರು.

ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ (ಸೆ.5) ನಗರ ಸಂತ ಅಂಥೋನಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19 ದಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಆಗುತ್ತಿಲ್ಲ. ಶಿಕ್ಷಕರಾಗಿ ನೀವು ವಿದ್ಯಾರ್ಥಿಗಳಿಗೆ ಪಾಠ ಅಷ್ಟೇ ಮಾಡದೇ ಕೋರೊ‌ನಾ ಸಂರ್ಭದಲ್ಲೂ ಕೂಡಾ ಮುಂದೆ ಬಂದು ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ಕೋವಿಡ್-19 ಸಂದರ್ಭದಲ್ಲಿ ಸುಮಾರು ನಾಲ್ಕು ತಿಂಗಳಿನಿಂದ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವೆ ಸಂಪರ್ಕ ಸರಿಯಾಗಿ ಸಾಧ್ಯವಾಗುತ್ತಿಲ್ಲ‌. ತಂದೆ ತಾಯಿಯನ್ನು ಹೊರತುಪಡಿಸಿ ಮಕ್ಕಳಿಗೆ ಶಿಕ್ಷಕರೆ ತಂದೆ ತಾಯಿಗಳು ಇದ್ದಂತೆ ಎಂದು ಅಭಿಪ್ರಾಯಪಟ್ಟರು.

Emergency Service

ಕೋರೊನಾ ಹೋಗಲಾಡಿಸಲು ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಬೇಕು. ಸೋಂಕು ತಗುಲಿದರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಶಾಸಕ ಅ‌ನಿಲ ಬೆನಕೆ ಅವರು ತಿಳಿಸಿದರು

ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಅವರು, ಶಿಕ್ಷಕರು ಪ್ರತಿಯೊಬ್ಬರ ಜೀವನದಲ್ಲಿ ಸಾಮಾಜಿಕ ಜ್ಞಾನವನ್ನು ತುಂಬುತ್ತಾರೆ. ನಮ್ಮ ದೇಶದ ಭವಿಷ್ಯ ಶಿಕ್ಷಕರು; ಶಿಕ್ಷಕರಿಂದ ನಾವು ಎಲ್ಲಾ ರಂಗದಲ್ಲೂ ಮುಂದೆ ಸಾಗುತ್ತಿದ್ದೇವೆ ಎಂದರು.

ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಪ್ರಾಮಾಣಿಕತೆಯಿಂದ ಶಿಕ್ಷಣವನ್ನು ನೀಡಿ, ಅವರಿಗೆ ಎಲ್ಲಾ ರೀತಿಯ ಜ್ಞಾನವನ್ನು ನೀಡುತ್ತಾರೆ. ಶಿಕ್ಷಕರಿಂದ ನಮ್ಮ ದೇಶ ಅಭಿವೃದ್ಧಿ ಹೊಂದುತ್ತಿದೆ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹಾಗೆ ಪ್ರತಿಯೊಬ್ಬರು ಸಮಾಜಕ್ಕೆ ಮಾದರಿ ಆಗಬೇಕು ಎಂದು ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಆಶಾ ಐಹೊಳೆಯವರು ತಿಳಿಸಿದರು.

ನಿವೃತ್ತ ಶಿಕ್ಷಕರು, ವಿಶೇಷ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ಎಮ್.ಜಿ ಹಿರೇಮಠ,ಜಿಲ್ಲಾ ಪಂಚಾಯತ ಸಿಇಒ ದರ್ಶನ ಎಚ್.ವ್ಹಿ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Bottom Add3
Bottom Ad 2