ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಟಿಪ್ಪು ಸುಲ್ತಾನ್ ಅಪ್ರತಿಮ ಹೋರಾಟಗಾರ. ತನ್ನ ಕೊನೆ ಉಸಿರುವವರೆಗೂ ನಾಡು ಮತ್ತು ದೇಶಕ್ಕಾಗಿ ಹೋರಾಟ ಮಾಡಿದರು. ಅವರ ಹೋರಾಟ ಇಂದಿನ ಪೀಳಿಗೆಯವರಿಗೆ ಮಾದರಿಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಟಿಪ್ಪು ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಡಿಕೇರಿ ದಂಗೆಯಲ್ಲಿ 70 ಸಾವಿರ ಸೈನಿಕರನ್ನು ಟಿಪ್ಪು ಕೊಂದ ಎಂದ ಬಿಜೆಪಿಗರು ಇತಿಹಾಸವನ್ನು ತಿರುಚುತ್ತಿದ್ದಾರೆ. ಏಕೆಂದರೆ ಆ ಸಮಯದಲ್ಲಿ 70 ಸಾವಿರ ಸೈನಿಕರೇ ಇರಲಿಲ್ಲ. ಬಿಜೆಪಿ ಹಾಗೂ ಆರೆಸ್ಸೆಸ್ಸೆನವರು ಇತಿಹಾಸ ತಿಳಿದು ಮಾತನಾಡಬೇಕು ಎಂದು ಹೇಳಿದರು.
ಯಡಿಯೂರಪ್ಪ, ಜಗದೀಶ ಶೆಟ್ಟರ್, ಆರ್.ಅಶೋಕ ಸೇರಿದಂತೆ ಬಿಜೆಪಿ ನಾಯಕರು ಹಿಂದೆ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿ, ಟಿಪ್ಪುವಿನ ಗುಣಗಾನ ಮಾಡಿದ್ದರು. ಆದರೆ, ಇಂದು ರಾಜಕೀಯಕ್ಕಾಗಿ ಟಿಪ್ಪುವಿನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಿಪ್ಪು ಜಾತ್ಯಾತೀತವಾಗಿದ್ದರು. ಅವರ ಸೇನೆಯಲ್ಲಿ ಎಲ್ಲ ಜಾತಿ, ಧರ್ಮದವರು ಇದ್ದರು. ಕನ್ನಡ ಭಾಷೆಯ ಬಗ್ಗೆಯೂ ಕೂಡ ಅವರಿಗೆ ಅಪಾರ ಅಭಿಮಾನವಿತ್ತು. ಅವರು ಒಂದೇ ಜಾತಿ, ಸಮುದಾಯಕ್ಕೆ ಸೀಮಿತವಲ್ಲ. ಇದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದರು.
ಮುಖಂಡರಾದ ಮೂಸಾ ಗೋರಿಖಾನ, ಅಕ್ಬರ್ ಸಡೇಕರ್, ತಬಸುಮ್ ಮುಲ್ಲಾ, ದಿಲ್ ದಾರ ಬೋಜಗಾರ್, ಇರ್ಫಾನ್ ನದಾಪ್, ಮುಬಸೀರ ಸಾಕಲೈನ್, ರೋಹಿಣಿ ಬಾಬಸೇಟ್ ಸೇರಿ ಇನ್ನಿತರರು ಹಾಜರಿದ್ದರು.
ಮೇಲ್ಮನೆ ಚುನಾವಣೆ: ಬೆಳಗಾವಿಯಲ್ಲಿ ಒಂದು ಸ್ಥಾನಕ್ಕೆ ಮಾತ್ರ ಕಾಂಗ್ರೆಸ್ ಸ್ಪರ್ಧೆ: ಸತೀಶ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ