ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರ ಸಂಪೂರ್ಣ ಸ್ಥಗೊಂಡಿದೆ. ಸಾರ್ವಜನಿಕರು ಪರದಾಡುತ್ತಿದ್ದಾರೆ. ಈ ನಡುವೆ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಾರಿಗೆ ನೌಕರರು ಮುಷ್ಕರ ನಿಲ್ಲಿಸಿ ಮಾತುಕತೆಗೆ ಬನ್ನಿ ಎಂದು ಮನವಿ ಮಾಡಿದ್ದಾರೆ.
ಜೊತೆಗೆ, ಎಸ್ಮಾ ಜಾರಿಗೆ ಚಿಂತನೆ ನಡೆದಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರ 9 ಬೇಡಿಕೆಗಳ ಪೈಕಿ 8 ಬೇಡಿಕೆ ಈಡೇರಿಸಿದ್ದೇವೆ. ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಆದರೂ ಹಠದಿಂದ ಮುಷ್ಕರ ನಡೆಸುತ್ತಿರುವುದು ಯಾಕೆ? ಸ್ವಾರ್ಥಕ್ಕಾಗಿ ಮುಷ್ಕರದ ಹಾದಿ ಹಿಡಿಯುವುದು ಸರಿಯಲ್ಲ. ಖಾಸಗಿ ವಾಹನದವರು ದುಪ್ಪಟ್ಟು ಹಣ ಪಡೆದರೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು.
ಮುಷ್ಕರ ಕೈಬಿಟ್ಟು ಮಾತುಕತೆಗೆ ಬನ್ನಿ ಆಗ ಯಾರೊಂದಿಗಾದರೂ ನಾನು ಮಾತುಕತೆಗೆ ಸಿದ್ಧ. ಬಸ್ ಸಂಚಾರ ಸ್ಥಗಿತವಾಗಿರುವುದರಿಂದ ಸರವಜನಿಕರಿಗೆ ತೊಂದರೆಯಾಗುತ್ತಿದೆ. ಈಗಾಗಲೇ ಎಸ್ಮಾ ಜಾರಿ ಬಗ್ಗೆಯೂ ಚರ್ಚೆ ನಡೆದಿದೆ. ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್
ಸರ್ಕಾರದ ಎಚ್ಚರಿಕೆಗೆ ಜಗ್ಗಲ್ಲ; ಮುಷ್ಕರ ನಿರ್ಧಾರದಿಂದ ಹಿಂದೆಸರಿಯಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ