ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಳಗಾವಿಯ ಜಿಲ್ಲಾಡಳಿತ ಹಾಗೂ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ, ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ಆ.13) ಎಸ್.ಜಿ , ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳ ನಡೆಸಲಾಯಿತು.
ಉದ್ಯೋಗ ಮೇಳವನ್ನು ಜಿಲ್ಲಾಧಿಕಾರಿಗಳಾದ ಎಮ್.ಜಿ, ಹಿರೇಮಠ ಅವರು ಉದ್ಘಾಟಿಸಿದರು. ಬೆಳಗಾವಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಡಾ. ಬಸವಪ್ರಭು ಹಿರೇಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಉದ್ಯೋಗ ಮೇಳದಲ್ಲಿ 35 ಕಂಪನಿಗಳು ಉದ್ಯೋಗಿಗಳ ಆಯ್ಕೆಗಾಗಿ ಭಾಗವಹಿಸಿದ್ದವು. ಈ ಉದ್ಯೋಗ ಮೇಳದಲ್ಲಿ 1223 ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಇವರಲ್ಲಿ ವಿವಿಧ ಕಂಪನಿಗಳಿಗೆ 382 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ.
ಕಾರ್ಯಕ್ರಮದಲ್ಲಿ ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮ ಪ್ರಭು ಮಹಾಸ್ವಾಮಿಗಳು, ಎಸ್.ಜಿ. ಬಾಳೇಕುಂದ್ರಿ, ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಬಿ.ಆರ್. ಪಟಗುಂದಿ, ಶ್ರೀ ಸಿದ್ಧರಾಮೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ, ವಿ.ಎಸ್. ಹೊಸಮನಿ ಉಪಸ್ಥಿತರಿದ್ದರು. ಎಸ್.ಎಸ್.ಇ. ಟಿ.ಐ.ಟಿ.ಐ ಕಿರಿಯ ತರಬೇತಿ ಅಧಿಕಾರಿಗಳಾದ ಎಮ್.ಎಸ್.ಹಿರೇಮಠ ನಿರೂಪಿಸಿದರು. ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ ದೇವಪ್ಪ ವಂದಿಸಿದರು.
ಕಟ್ಟಡ ಕಾರ್ಮಿಕರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ನೆರೆ ಸಂತ್ರಸ್ಥರಿಗೆ ಆಹಾರ ಕಿಟ್ ವಿತರಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ