ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೈಕ್, ಟಿವಿ, ಫ್ರಿಡ್ಜ್ ಇದ್ದರೆ ಬಿಪಿಎಲ್ ಪಡಿತರ ರದ್ದು ಮಾಡುವುದಾಗಿ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕತ್ತಿ, 5 ಎಕರೆಗಿಂತ ಹೆಚ್ಚು ಜಮೀನು, ಮನೆಯಲ್ಲಿ ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು. ಇವುಗಳಲ್ಲಿ ಯಾವುದಾದರೂ ಒಂದು ಇದ್ದರೂ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಾಗಿ ತಿಳಿಸಿದರು.
ಇವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೆ ಗಡುವು ನಿಡಲಾಗಿದ್ದು, ಏಪ್ರಿಲ್ ಬಳಿಕ ಸರ್ಕಾರ ಕಾರ್ಡ್ ಹೊಂದಿದವರ ಪರಿಶೀಲನೆ ನಡೆಸಲಿದೆ.ಒಂದು ವೇಳೆ ಎಲ್ಲಾ ಸೌಲಭ್ಯ ಹೊಂದಿಯೂ ಬಿಪಿಎಲ್ ಕಾರ್ಡ್ ಹೊಂದಿದ್ದರೆ ದಂಡದ ಜೊತೆ ಶಿಕ್ಷೆ ನೀಡಲಾಗುವುದು ಎಂದು ಎಚ್ಚರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ