Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಕುಸಿದ ರಸ್ತೆಯಲ್ಲಿ ಬಿದ್ದ ಬೈಕ್ ಸವಾರ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಅಬ್ಬರಕ್ಕೆ ರಸ್ತೆಯೇ ಕುಸಿದು ಹೋಗಿದ್ದು, ಕುಸಿದ ರಸ್ತೆಯಲ್ಲಿ ಬಿದ್ದ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ.

ವಡಗಾವಿ-ಅನಗೋಳ ಮಧ್ಯೆ ರಸ್ತೆ ಕುಸಿದು ಅವಘಡ ಸಂಭವಿಸಿದೆ. ಮಳೆಯಿಂದಾಗಿ ರಸ್ತೆ ಕುಸಿದು, 3 ಅಡಿ ಹೊಂಡ ನಿರ್ಮಾಣವಾಗಿದೆ. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಬೈಕ್ ಸವಾರ ಕುಸಿದ ರಸ್ತೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಕಾಶ್ ಪಾಟೀಲ್ ಎಂದು ಗುರುತಿಸಲಾಗಿದೆ.

ಚುನಾವಣೆಯ ವೇಳೆ ತಾರಾತುರಿಯಲ್ಲಿ ಇಲ್ಲಿ ರಸ್ತೆ ಕಾಮಗಾರಿ ನಡೆಸಲಾಗಿದ್ದು, ಕೆಲ ತಿಂಗಳ ಹಿಂದಷ್ಟೇ ನಿರ್ಮಾಣವಾಗಿದ್ದ ರಸ್ತೆ, ಕಳಪೆ ಕಾಮಗಾರಿ ಪರಿಣಾಮ ಒಂದೇ ಮಳೆಗೆ ಬಿರುಕು ಬಿಟ್ಟಿದೆ. ಹಲವೆಡೆ ರಸ್ತೆ ಕುಸಿದು ಹೊಂಡ ನಿರ್ಮಾಣವಾಗಿದೆ. ರಸ್ತೆ ದುರಾವಸ್ಥೆಗೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button