
ಪ್ರಗತಿವಾಹಿನಿ ಸುದ್ದಿ:
ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಹಾಕಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಪಕ್ಕದ ಮನೆಯವರೇ ಮಹಿಳೆ ಮೇಲೆ ಹಲ್ಲೆ ನಡೆಸಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ವಡ್ಡರವಾಡಿ ಮನೆಯಲ್ಲಿ ತಾಯಿ-ಮಗಳು ಸೇರಿ ನಾಲ್ವರು ಮನೆಯೊಂದರಲ್ಲಿ ವಾಸವಾಗಿದ್ದಾರೆ. ಪಕ್ಕದ ಮನೆಯ ಕುಟುಂಬದವರು ಮಹಿಳೆಯ ವಿರುದ್ಧ ವೇಶ್ಯಾವಾಟಿಕೆ ಆರೋಪ ಮಾಡುತ್ತಿದ್ದಾರೆ. ಮನೆಗೆ ಪದೇ ಪದೇ ಯಾರೋ ಸಂಬಂಧವಿಲ್ಲದವರು ಬರುತ್ತಾರೆ. ಮನೆ ಖಾಲಿ ಮಾಡುವಂತೆ ಹೇಳುತ್ತಿದ್ದರು. ಇದೀಗ ನೆರೆಮನೆಯವರು ಏಕಾಏಕಿ ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆಳೆದು ತಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣದ ಸತ್ತಾಸತ್ಯತೆ ಇನ್ನಷ್ಟೆ ಗೊತ್ತಾಗಬೇಕಿದೆ.
ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ