Belagavi NewsBelgaum NewsKannada NewsKarnataka NewsLatestPolitics

*ಇಡೀ ಸಮಾಜವೇ ತಲೆತಗ್ಗಿಸುವಂತಹ ಕೃತ್ಯವಿದು; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದಾರೆ.

Home add -Advt

ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಮಧ್ಯೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದು, ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


Related Articles

Back to top button