Belagavi NewsBelgaum NewsKannada NewsKarnataka NewsLatestPolitics

*ಬೆಳಗಾವಿಯಲ್ಲಿ ಅಮಾನವೀಯ ಘಟನೆ; ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಂಟಮೂರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರೀತಿಸಿದ್ದ ಯುವತಿ ಜೊತೆ ವಂಟಮೂರಿ ಗ್ರಾಮದ ಯುವಕ ಓಡಿಹೋಗಿದ್ದ. ಇದರಿಂದ ಆಕ್ರೋಶಗೊಂಡ ಯುವತಿ ಕುಟುಂಬದವರು, ಯುವಕನ ಮನೆಬಳಿ ಬಂದು ಗಲಾಟೆ ಮಾಡಿದ್ದಾರೆ. ಅಲ್ಲದೇ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ, ಅವಮಾನ ಮಾಡಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Home add -Advt

ಪ್ರಕರಣ ಸಂಬಂಧ ಮಹಿಳೆ ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button