Kannada NewsLatest

ಪರಿಷತ್ ನ 14 ಕಾಂಗ್ರೆಸ್ ಸದಸ್ಯರ ಅಮಾನತು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನ ಪರಿಷತ್ ನ 14 ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ್ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಇಂದು ಭೂ ಹಗರಣ ಕುರಿತು ಕಾಂಗ್ರೆಸ್ ಸದಸ್ಯರು ಸದನದಲ್ಲಿ ಗದ್ದಲ-ಕೋಲಾಹಲ ಆರಂಭಿಸಿದರು. ನಿಲುವಳಿ ಸೂಚನೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಪ್ರತಿಭಟನೆ ಕೈಬಿಟ್ಟು ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗಳು ಸೂಚಿಸಿದರೂ ಕಾಂಗ್ರೆಸ್ ಸದಸ್ಯರ ಧರಣಿ ಮುಂದುವರೆಯಿತು. ಸಭಾಪತಿಗಳ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರಾದ ಎಸ್.ಆರ್.ಪಾಟೀಲ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ 14 ಸದಸ್ಯರನ್ನು ಸದನದಿಂದ 1 ದಿನದ ಮಟ್ಟಿಗೆ ಅಮಾನತುಗೊಳಿಸಿ ಆದೇಶ ಹೊರಡಿಸಿದರು.

Related Articles

Back to top button