ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 16 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವಿಡಿಯೋ ವೀಕ್ಷಕ ಟೀಮ್ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಟೀಮ್ ಗಳ ನಿಯೋಜಿತ ಅಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತುದಾರ ಎನ್.ವಿ. ಶಿರಗಾಂವಕರ ಅವರಿಂದ ತರಬೇತಿ ನೀಡಲಾಯಿತು.
ನಗರದ ಕಟ್ಟಿಮನಿ ಸಭಾಂಗಣದಲ್ಲಿ ಗುರುವಾರ (ನ.18) ವಿಧಾನಪರಿಷತ್ ಚುನಾವಣೆಯ Video Surveillance / Flying Squad ನಿಯೋಜಿತ ಅಧಿಕಾರಿಗಳಿಗೆ ತರಬೇತಿ ನೀಡಿದರು.
ವಿಧಾನಪರಿಷತ್ ಚುನಾವಣೆ ದಿನಾಂಕ ನಿಗದಿಪಡಿಸಿದ ದಿನದಿಂದ ಡಿಸೆಂಬರ್ 16 ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯೋಜಿತ ಅಧಿಕಾರಿಗಳು ನಿರಂತರ ಪರಿಶೀಲನೆ ನಡೆಸಬೇಕು ಹಾಗೂ ಅಭ್ಯರ್ಥಿಗಳ ಪರ ಪ್ರಚಾರ ಹಾಗೂ ಕಾರ್ಯಕ್ರಮಗಳನ್ನು ವಿಡಿಯೋ ಚಿತ್ರೀಕರಣ ನಡೆಸಿ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು.
ಚುನಾವಣೆಯಲ್ಲಿ ವಿಡಿಯೋ ಸರ್ವೈಲೆನ್ಸ್ ಟೀಮ್ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಟೀಮ್ ಗಳು ಕಾರ್ಯನಿರ್ವಹಿಸಲಿವೆ. ಭದ್ರತೆಯ ದೃಷ್ಟಿಯಿಂದ ಪ್ರತಿ ತಂಡಗಳಿಗೆ ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗುವುದು.
ವಿಧಾನಪರಿಷತ್ ಚುನಾವಣೆಯ ಮತದಾರರಾಗಿ ಗ್ರಾಮ ಪಂಚಾಯಿತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮಹಾನಗರ ಪಾಲಿಕೆಯ ಸದಸ್ಯರು ಮತದಾನ ಮಾಡಬಹುದಾಗಿದೆ. ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಮತದಾನ ನಡೆಸಲಾಗುವುದು.
ಅಧಿಕಾರಿಗಳು ಯಾವುದೇ ರೀತಿಯ ನಿಯಮ ಉಲ್ಲಂಘನೆಯಾದಲ್ಲಿ ತಕ್ಷಣವೇ ಮೇಲಧಿಕಾರಿಗಳಿಗೆ ಮಾಹಿತಿ ಒದಗಿಸಬೇಕು. ಅಧಿಕಾರಿಗಳ ಜೊತೆಗೆ ವಿಡಿಯೋಗ್ರಾಫರ್ ಹಾಗೂ ರಕ್ಷಣಾ ಸಿಬ್ಬಂದಿಗಳನ್ನೊಳಗೊಂಡ ತಂಡ ರಚಿಸಲಾಗುವುದು.
ಚುನಾವಣಾ ಅಭ್ಯರ್ಥಿಗಳ ಪ್ರಚಾರದ ಕುರಿತು ಮಾಹಿತಿ ದೊರೆತಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಾರ್ಯಕ್ರಮದ ಅಥವಾ ಪ್ರಚಾರಕ್ಕೆ ಸಂಬಂಧಿಸಿದ ವಸ್ತುಗಳ ಖರ್ಚು ವೆಚ್ಚುಗಳನ್ನು ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಕ್ರಮಗಳಲ್ಲಿ ನೀತಿಸಂಹಿತೆ ಉಲ್ಲಂಘನೆಯಾದಲ್ಲಿ ತಕ್ಷಣ ಮೇಲಧಿಕಾರಿಗಳ ಗಮನಕ್ಕೆ ತರಬೇಕು.
ಕಾರ್ಯಕ್ರಮ, ರ್ಯಾಲಿ ಹಾಗೂ ಸಮಾರಂಭಗಳು ಹಾಗೂ ಎಲ್ಲ ಪಕ್ಷಗಳ ಪ್ರಚಾರ ಸಭೆಗಳ ಕುರಿತು ಪರಿಶೀಲನೆ ನಡೆಸಬೇಕು ಎಂದು ಶಿರಗಾಂವಕರ ತಿಳಿಸಿದರು.
ದೂರು ಬಂದರೆ ತಕ್ಷಣ ಸ್ಥಳಕ್ಕೆ ಧಾವಿಸಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಜೊತೆಗೆ ವಿಡಿಯೋ ವರದಿಗಳನ್ನು ನಿಯೋಜಿತ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಒದಗಿಸಬೇಕು ಎಂದು ಹೇಳಿದರು.
ಪೊಲೀಸ್ ಸಿಬ್ಬಂದಿಗಳು ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಆಗಿದ್ದಲ್ಲಿ ಅಧಿಕಾರಿಗಳ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಬೇಕು ಎಂದು ನಿಯೋಜಿತ ಪೊಲೀಸ್ ಸಿಬ್ಬಂದಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಬುಡಾ ಆಯುಕ್ತರಾದ ಪ್ರೀತಂ ನಸಲಾಪುರೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ