Belagavi NewsBelgaum NewsKannada NewsKarnataka NewsLatest

*ಬಿಬಿಎಂಪಿ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕಕ್ಕೆ ಮೇಲ್ಮನೆಯಲ್ಲೂ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರವಾಗಿದ್ದ ಬಿಬಿಎಂಪಿ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕಕ್ಕೆ ಮೇಲ್ಮನೆಯಲ್ಲೂ ಗುರುವಾರ ಅನುಮೋದನೆ ಸಿಕ್ಕಿದೆ.

ವಿಧಾನ ಪರಿಷತ್ ಕಲಾಪದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ವಿಧೇಯಕ ಕುರಿತ ಚರ್ಚೆ ವೇಳೆ ಬಡಾವಣೆ ಮತ್ತು ಕಟ್ಟಡಗಳನ್ನು ವರ್ಗೀಕರಣ ಮಾಡಿ ಅದರಕ್ಕೆ ಅನುಗುಣವಾಗಿ ಶುಲ್ಕ ವಿಧಿಸಬೇಕು ಎಂಬ ಶರವಣ ಮತ್ತು ಕೇಶವಮೂರ್ತಿ ಅವರ ಸಲಹೆಯನ್ನು ಪರಿಗಣಿಸುವುದಾಗಿ ಡಿಸಿಎಂ ಅವರು ತಿಳಿಸಿದರು.

ಈ ವಿಧೇಯಕ ಅಂಗೀಕಾರದಿಂದಾಗಿ ಪ್ರಸ್ತುತ ಬಿಬಿಎಂಪಿಗೆ 2500 ಕೋಟಿ ರೂಪಾಯಿ ಉಳಿತಾಯವಾಗಿದ್ದು, ಪ್ರತಿ ವರ್ಷ ಪಾಲಿಕೆಗೆ ಹೆಚ್ಚುವರಿಯಾಗಿ 500 ಕೋಟಿ ರೂ. ಆದಾಯ ಬರಲಿದೆ. ಬೆಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮುತುವರ್ಜಿ ಪರಿಣಾಮ ಈ ವಿಧೇಯಕ ಅಂಗೀಕಾರವಾಗಿ ಪಾಲಿಕೆಯ ಬೊಕ್ಕಸಕ್ಕೆ ಉಳಿತಾಯವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button