Belagavi NewsBelgaum NewsKarnataka News
*ಬೆಳಗಾವಿ: ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲುಕಿನ ಬೋರಗಾಂವ ಗ್ರಾಮ ಲೆಕ್ಕಧಿಕರಿಯಾಗಿರುವ ವಿಠ್ಠಲ ಡವಳೇಶ್ವರ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆ ವಿಠ್ಠಲ ಡವಳೇಶ್ವರ ಅಕ್ರಮವಾಗಿ ಹಣ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ. ಚಿಕ್ಕೋಡಿಯಿಂದ ಬಾಗಲಕೋಟೆಗೆ 1.10 ಕೋಟಿ ಹಣ ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಬಿದ್ದಿದ್ದರು. ನಿಪ್ಪಾಣಿ ಪಟ್ಟಣದ ಬಾಡಿಗೆ ಮನೆಯಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಹಣ ಪತ್ತೆಯಾಗಿತ್ತು. ಡವಳೇಶ್ವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪವೂ ಇದೆ. ಈ ಹಿನ್ನೆಲೆಯಲ್ಲಿ ಇದೀಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



