ಹಿಂದೂಗಳ ಮೇಲೆ ಮುಸ್ಲಿಂ ಸಂಘಟನೆಗಳ ದಾಳಿ; ಬೆಳಗಾವಿಯಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಸ್ಲಿಂ ಜಿಹಾದಿಗಳು ಹಿಂದುಗಳ ಮೇಲೆ ನಡೆಸುತ್ತಿರುವ ಹಿಂಸಾಚಾರ, ದೌರ್ಜನ್ಯಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.
ವಿಶ್ವಹಿಂದೂ ಪರಿಷತ್ ಉತ್ತರ ಕರ್ನಾಟಕ ಸಹ ಕೋಶಾಧ್ಯಕ್ಷ ಕೃಷ್ಣ ಭಟ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಬೆಳಗಾವಿ ಜಿಲ್ಲಾ ಘಟಕದ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ದೇಶದಲ್ಲಿ ಕೆಲ ದಿನಗಳಿಂದ ಮುಸ್ಲಿಂ ಜಿಹಾದಿಗಳು ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆ. ಶ್ರೀರಾಮ ನವಮಿ ಶೋಭಾಯಾತ್ರೆ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಇಂತಹ ದಾಳಿಕೋರರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇಸ್ಲಾಂ ಧರ್ಮಕ್ಕೆ ಅವಮಾನ ಎನ್ನುವ ನೆಪವೊಡ್ಡಿ ಕಾನೂನನ್ನೇ ಕೈಗೆತ್ತಿಕೊಳ್ಳುತ್ತಿಕೊಂಡು ಹಿಂದೂಗಳ ಮೇಲೆ ದಳಿ, ಕಲ್ಲು ತೂರಾಟ, ಆಸ್ತಿ ಪಾಸ್ತಿ ನಾಶ ಹೀಗೆ ದುಷ್ಕೃತ್ಯವೆಸಗುವುದು ಎಷ್ಟು ಸರಿ? ನೂಪುರ್ ಶರ್ಮಾ, ನವೀನ್ ಜಿಂದಾಲ್ ಅವರ ವಿವಾದಾತ್ಮಕ ಹೇಳಿಕೆ ಎಂಬ ನೆಪದಲ್ಲಿ ಹಿಂದೂಗಳ ಮೇಲೆ ಹಲ್ಲೆ, ಜೀವ ಬೆದರಿಕೆ, ದೇವ-ದೇವತೆಗಳಿಗೆ ಅಪಮಾನ ಮಾಡಲಾಗುತ್ತಿದೆ. ಇಂತಹ ಮುಸ್ಲಿಂ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ