Kannada News

ಜವಳಿ ಸಚಿವರ ತವರಲ್ಲೇ ನೇಕಾರರ ಸರಣಿ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಾಲಬಾದೆ ತಾಳಲಾರದೇ ಒಂದೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ.

ಜಿಲ್ಲೆಯ ಬೆಳಗಾವಿ ನಗರದ ವಡಗಾಂವ ನಿವಾಸಿ ಸುಜಿತ್ ಉಪರಿ (38), ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ (60), ವಡಗಾಂವ ನಿವಾಸಿ ಸುವರ್ಣ ಕಾಮ್ಕರ್ (47) ಆತ್ಮಹತ್ಯೆಗೆ ಶರಣಾದ ನೇಕಾರರು. ಕೊರೊನಾ ನಡುವೆ ಕೆಲಸವಿಲ್ಲದೇ ಕುಟುಂಬ ಸಾಗಿಸಲಾಗದೆ, ಸಾಲದ ಕಿರುಕುಳಕ್ಕೆ ಬೇಸತ್ತು ನೇಕಾರರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಇಷ್ಟಾಗ್ಯೂ ಜವಳಿ ಸಚಿವರು ನೇಕಾರರ ಸಂಕಷ್ಟವನ್ನು ಆಲಿಸುತ್ತಲೂ ಇಲ್ಲ, ಸಾಂತ್ವನ ಹೇಳುತ್ತಲೂ ಇಲ್ಲ. ಜವಳಿ ಸಚಿವರಾಗಿ ಆಯ್ಕೆಯಾದ ಬಳಿಕ ಜಿಲ್ಲೆಯಲ್ಲಿ ಶ್ರೀಮಂತ ಪಾಟೀಲ್ ಒಂದೇ ಒಂದು ಸಭೆ ಕೂಡ ನಡೆಸಿಲ್ಲ ಎಂದು ನೇಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಸಚಿವ ಶ್ರೀಮಂತ ಪಾಟೀಲ್, ಇಂದು ಮಧ್ಯಾಹ್ನ 12:30ಕ್ಕೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ನೇಕಾರ ಮುಖಂಡರ ಸಭೆ ನಡೆಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button