ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಆದಾಗ್ಯೂ ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿ ಜನರು ಓಡಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.
ಮಾರುಕಟ್ಟೆಗಳಲ್ಲಿ ಜನರು ಕೊರೊನಾ ಆತಂಕವಿಲ್ಲದೇ ನಿಯಮ ಉಲ್ಲಂಘಿಸಿ ಅಗತ್ಯ ವಸ್ತುಗಳಖರೀದಿಯಲ್ಲಿ ತೊಡಗಿದ್ದಾರೆ.
ಬೆಳಗಾವಿಯ ಜೈಕಿಸಾನ್ ಮಾರುಕಟ್ಟೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ವರ್ತಕರು, ಗ್ರಾಹಕರು ಮಾಸ್ಕ್, ದೈಹಿಕ ಅಂತರ ಮರೆತು ವ್ಯಾಪಾರ ವಹಿವಾಟು ನಡೆಸಿದ್ದಾರೆ.
ಗುಂಪು ಗುಂಪಾಗಿ ಮಾರುಕಟ್ಟೆಗಳಿಗೆ ಆಗಮಿಸಿದ ಜನರು ಯಾವುದೇ ನಿಯಮ ಪಾಲಿಸದೇ ಖರೀದಿ ಭರಾಟೆಯಲ್ಲಿ ತೊಡಗಿದ್ದಾರೆ. ಮಹಾರಾಷ್ಟ್ರ, ಗೋವಾದಿಂದಲೂ ವರ್ತಕರು ಮಾರುಕಟ್ಟೆಗೆ ಆಗಮಿಸಿದ್ದು ಆದರೂ ಯಾವುದೇ ಕೋವಿಡ್ ನಿಯಮ ಪಾಲನೆಯಾಗಿಲ್ಲ.
ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಹೊರ ರಾಜ್ಯದ ವರ್ತಕರು ಆಗಮಿಸುತ್ತಿರುವುದರಿಂದ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗುವ ಭೀತಿ ಎದುರಾಗಿದೆ.
ಒಮಿಕ್ರಾನ್ ನಡುವೆ ಕೊರೊನಾ ಸ್ಫೋಟ; ಒಂದೇ ದಿನದಲ್ಲಿ 2.71 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ