Belagavi NewsBelgaum NewsKannada NewsKarnataka NewsLatest

*ಪತಿಯನ್ನೇ ಕೊಲೆಗೈದು ನಾಪತ್ತೆ ಎಂದು ದೂರು ನೀಡಿದ್ದ ಮಹಿಳೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿ ಕಳೆದ ಮೂರು ತಿಂಗಳ ಹಿಂದೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿ ಈಗ ಖಾಕಿಗೆ ಲಾಕ್ ಆದ ಘಟನೆ ನಡೆದಿದೆ.

ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತಿಯನ್ನೇ ಗೆಳೆಯನೊಂದಿಗೆ ಸೇರಿಕೊಂಡು ಕೊಲೆ ಮಾಡಿ ಕಳೆದ ಮೂರು ತಿಂಗಳು ಹಿಂದೆ ನನ್ನ ಪತಿ ರಮೇಶ ಕಾಂಬಳೆ ಕಾಣೆಯಾಗಿದ್ದಾನೆ ಎಂದು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ನಾಟಕ ಮಾಡಿದ ಪತ್ನಿಯ ಬಣ್ಣ ಬಯಲಾಗಿ ಈಗ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಅತಿಥಿಯಾಗಿದ್ದಾರೆ.

ತಮ್ಮ ಅನೈತಿಕ ಸಂಬಂಧ ಪತಿಯ ಎದುರಿಗೆ ಬಯಲಿಗೆ ಬರುತ್ತಿದ್ದಂತೆ ಕಲ್ಲಂಗಡಿ ಹಣ್ಣಿನಲ್ಲಿ ನಿದ್ದೆ ಮಾತ್ರೆ ಹಾಕಿ ತಿನ್ನಿಸಿ, ನಂತರ ನೈಲಾನ್ ಹಗ್ಗದಿಂದ ಕುತ್ತಿಗೆ ಬಿಗಿದು, ದಿಂಬಿನಿಂದ ಉಸಿರುಗಟ್ಟಿಸಿ ಪತಿಯನ್ನು ಕೊಲೆ ಮಾಡಿ ಶವವನ್ನು ಚೋರ್ಲಾ ಘಾಟ್ ನಲ್ಲಿ ಎಸೆದು ಎಪಿಎಂಸಿ ಪೊಲೀಸ್ ಠಾಣೆಗೆ ಕಳೆದ ಮೂರು ತಿಂಗಳ ಹಿಂದೆ ಸಂದ್ಯಾ ಕಾಂಬಳೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದಳು.

ಈಗ ಕೊಲೆಯಾಗಿದೆ ಎಂದು ತಿಳಿದ ಕೂಡಲೇ ಎಪಿಎಂಸಿ ಪೊಲೀಸರು ಕಿಲಾಡಿ ಪತ್ನಿ ಸಂದ್ಯಾ, ಆಕೆಯ ಗೆಳೆಯ ಬಾಳು ಬಿರಂಜೆ ಸೇರಿದಂತೆ ಅವರಿಗೆ ಸಹಕರಿಸಿದ ಜಯ ಅಲಿಯಾಸ್ ಸೋನು ಮೋಹನ ಸಸಾನೆ, ನಿತೇಶ ಮಹಾದೇವ ಅವಳೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಇದು ಅನೈತಿಕ ಸಂಬಂಧದ ಕೊಲೆ ಎಂದು ಶಂಕಿಸಿರುವ ಪೊಲೀಸರು ರಮೇಶ ಶವ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಎಪಿಎಂಸಿ ‌ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button