ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಡಿಸೆಂಬರ್ 13ರಿಂದ ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಬರದ ಸಿದ್ಧತೆ ನಡೆದಿದೆ. ಈಬಾರಿ ಭದ್ರತೆಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಕೋವಿಡ್ ಮುಂಜಾಗೃತೆ ಹಿನ್ನೆಲೆಯಲ್ಲಿ ಅಧಿವೇಶನಕ್ಕೆ ಬರುವವರಿಗೆ 72 ಗಂಟೆ ಒಳಗಿನ ಆರ್ ಟಿಪಿಸಿ ಆರ್ ಟೆಸ್ಟ್ ನೆಗೆಟಿವ್ ವರದಿ ಕಡ್ಡಾಯವಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಅಧಿವೇಶನಕ್ಕೆ ಭದ್ರತೆಗಾಗಿ ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಓರ್ವ ನಗರ ಪೊಲೀಸ್ ಆಯುಕ್ತ, ಇಬ್ಬರು ಡಿಸಿಪಿ, 15 ಎಸ್ ಪಿ, 35 ಡಿವೈಎಸ್ ಪಿ, 100 ಸಿಪಿಐ, 250 ಪಿಎಸ್ ಐ, ಹೋಮ್ ಗಾರ್ಡ್ಸ್ ಸೇರಿದಂತೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್ ಕೈಗೊಳ್ಳಲಾಗಿದೆ.
ಅಧಿವೇಶನಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ವಾಸ್ತವ್ಯಕ್ಕೆ ಜರ್ಮನ್ ಮಾದರಿಯ ಟೌನ್ ಶಿಪ್ ನಿರ್ಮಾಣ ಮಾಡಲಾಗಿದೆ. ಮೂರು ಟೆಂಟ್ ಗಳಲ್ಲಿ 1800 ಸಿಬ್ಬಂದಿಗಳಿಗೆ ಬೆಡ್ ವ್ಯವಸ್ಥೆ ಮಾಡಲಾಗಿದೆ.
17 ಜನರಲ್ಲಿ ಒಮಿಕ್ರಾನ್ ಪತ್ತೆ; ಮಹಾರಾಷ್ಟ್ರದಲ್ಲಿ 144 ಸೆಕ್ಷನ್ ಜಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ