Latest

*ಮಹಾರಾಷ್ಟ್ರ ನಾಯಕರ ವರ್ತನೆ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜಕೀಯ ನಾಯಕರು ಉದ್ಧಟತನದ ಹೇಳಿಕೆಗಳನ್ನು ನೀಡುತ್ತಿದ್ದು, ಮಹಾರಾಷ್ಟ್ರ ನಾಯಕರ ವರ್ತನೆ ವಿರುದ್ಧ ವಿಧನಸಭೆಯಲ್ಲಿ ಖಂಡನಾ ನಿರ್ಣಯವನ್ನು ಅಂಗೀಕರಿಸಲಾಯಿತು.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ರಾಜಕೀಯ ನಾಯಕರು ಉಭಯ ರಾಜ್ಯಗಳ ಸಾಮರಸ್ಯ ಕದಡಲು ಯತ್ನಿಸುತ್ತಿದ್ದಾರೆ. ಶಿವಸೇನೆ ನಾಯಕ ಸಂಜಯ್ ರಾವತ್ ದೇಶ ದ್ರೋಹಿ. ರಾವತ್ ಚೀನಾ ಏಜೆಂಟ್ ಇರಬಹುದು ಎನಿಸುತ್ತಿದೆ. ಚೀನಾ ಭಾರತಕ್ಕೆ ನುಗ್ಗಿದ ರೀತಿ ಬೆಳಗಾವಿಗೆ ನುಗ್ಗುತ್ತೇವೆ ಎಂದು ಹೇಳಿಕೆಕೊಟ್ಟಿದ್ದಾರೆ. ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈ ರೀತಿ ಪ್ರಚೋದನಕಾರಿ ಹೇಳಿಕೆಗಳನ್ನು ಕೊಟ್ಟರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಬೆಳಗಾವಿಗೆ ನುಗ್ಗಿದರೆ ಕನ್ನಡಿಗರು ಸೈನಿಕರ ರೀತಿಯಲ್ಲೇ ಹಿಮ್ಮೆಟ್ಟಿಸುತ್ತೇವೆ ಎಂದು ಗುಡುಗಿದರು.

ಇದೇ ವೇಳೆ ಮಹಾರಾಷ್ಟ್ರ ನಾಯಕರ ವಿರುದ್ಧ ಸಿಎಂ ಬೊಮ್ಮಾಯಿ ಸದನದಲ್ಲಿ ಖಂಡನಾ ನಿರ್ಣಯ ಮಡಿಸಿದರು. ಮಹಾರಾಷ್ರ ನಾಯಕರ ವರ್ತನೆ ಖಂಡಿಸಿ ಖಂಡನಾ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

 

*3ನೇ ಡೋಸ್ ಲಸಿಕೆ ಬಗ್ಗೆ ನಿರ್ಲಕ್ಷ ಬೇಡ; ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ*

 

https://pragati.taskdun.com/cm-bsavaraj-bommaicovid-meetingdr-sudhakar/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button