Latest

ಮತಾಂತರ ನಿಷೇಧ ಕಾಯ್ದೆ ಮಂಡನೆ; ಸಿಎಂ ಬೊಮ್ಮಾಯಿ ಹೇಳಿದ್ದೇನು?

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ ಎಂಬ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ಕಾರದ ಆದ್ಯತೆ ಕೆಲ ಕಾನೂನು ಮಾಡುವುದು ಹಾಗೂ ಜನಪರ ಯೋಜನೆಗಳ ಬಗ್ಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ, ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿ. ವಿಪಕ್ಷಗಳು ಎತ್ತುವ ಎಲ್ಲಾ ಪ್ರಶ್ನೆಗಳಿಗೂ ಸಮರ್ಪಕವಾಗಿ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದರು.

ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ಬಳಿಕ ಸದನದಲ್ಲಿ ಜಾರಿಗೆ ತರಲಾಗುವುದು. ಹಲವು ಕಾನೂನು ಬಗ್ಗೆ ಪರ ವಿರೋಧ ಇದ್ದೇ ಇರುತ್ತದೆ. ಆದರೆ ಸರ್ಕಾರ ಜನ ಹಿತಕ್ಕಾಗಿ ಕೆಲ ಕಾನೂನು ತರಬೇಕಾಗುತ್ತದೆ. ಸಮಗ್ರ ಚರ್ಚೆಗೂ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.
21 ವರ್ಷದ ಬಳಿಕ ಭಾರತಕ್ಕೆ ಭುವನಸುಂದರಿ ಪಟ್ಟ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button