Belagavi NewsBelgaum NewsKarnataka News

*ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಅಧಿಕೃತವಾಗಿ ಡೇಟ್ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: 2024ನೇಸಾಲಿನ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತವಾಗಿ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಿದ್ದಾರೆ.

Home add -Advt

ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಇನ್ನು ಡಿಸೆಂಬರ್‌ 9 ರಿಂದ 20ವರೆಗೆ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎಂದು ಸ್ಪೀಕರ್‌ ಯುಟಿ ಖಾದರ್‌, ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಈಗಾಗಲೇ ಮಾಹಿತಿ ನೀಡಿದ್ದಾರೆ.

Related Articles

Back to top button