Kannada NewsLatest

*ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಮುಕ್ತಾಯ?*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಒಂದು ದಿನ ಮುಂಚಿತವಾಗಿ ಮುಗಿಯುವ ಸಾಧ್ಯತೆ ದಟ್ಟವಾಗಿದೆ.

ಡಿಸೆಂಬರ್ 19ರಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನ ಡಿಸೆಂಬರ್ 30ರವರೆಗೆ ನಡೆಯಬೇಕಿತ್ತು. ಆದರೆ ಒಂದು ದಿನ ಮೊದಲೇ ಸಮಾಪ್ತಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Home add -Advt

ಅಧಿವೇಶನವನ್ನು ಡಿ.29ಕ್ಕೆ ಮುಗಿಸುವ ಬಗ್ಗೆ ಸದನ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆಯಾಗಿದೆ. ಡಿಸೆಂಬರ್ 30ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದು, ಬಿಜೆಪಿ ಸಮಾವೇಶ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರು, ಬಿಜೆಪಿ ಶಾಸಕರು ಮಂಡ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿ.29ಕ್ಕೆ ಅಧಿವೇಶನವನ್ನು ಮೊಟಕುಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

*ವಕೀಲರ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಬಲ*

https://pragati.taskdun.com/belagaviadvocateprotestd-k-shivakumar-support/

Related Articles

Back to top button